Headlines
Loading...
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ



ಬೆಂಗಳೂರು:-

ವರ್ಗಾವಣೆ ನಿರೀಕ್ಷೆಯಲ್ಲಿರುವ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ಒಂದನ್ನು ನೀಡಿದ್ದು ಶಿಕ್ಷಕರ ವರ್ಗಾವಣೆ ಸಂಬಂಧ ಮರು ಹಂಚಿಕೆಯ ಕೌನ್ಸಲಿಂಗ್ ಗೆ ಅರ್ಹರಾಗಿರುವ ಹೆಚ್ಚುವರಿ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ.

ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ಮರು ಹೊಂದಣಿಕೆ ಕೌನ್ಸಲಿಂಗ್ ಬ್ಲಾಕ್ ಹಂತದಲ್ಲಿ ನಾಳೆಯಿಂದ ನಡೆಯಲಿದ್ದು ಹೆಚ್ಚುವರಿ ಶಿಕ್ಷಕರ ವರ್ಗಾವಣೆಯಲ್ಲಿ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಿ ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಶಿಕ್ಷಣ ಇಲಾಖೆಯು ವರ್ಗಾವಣೆ ಪ್ರಕ್ರಿಯೆ ನಡೆಸಲಾಗುತ್ತಿದೆ.

ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ 10,500 ಹೆಚ್ಚುವರಿ ಶಿಕ್ಷಕರನ್ನು ವಿಷಯವಾರು ಗುರುತಿಸಲಾಗಿದ್ದು ಅವರಿಗೆ ಕೌನ್ಸೆಲಿಂಗ್ ನಡೆಸಿ ತಾಲೂಕಿನೊಳಗೆಯೇ ವರ್ಗಾವಣೆಯನ್ನು ಮಾಡುವುದಾಗಿ ಶಿಕ್ಷಣ ಇಲಾಖೆಯೂ ತಿಳಿಸಿದೆ. ಇಂದು ಜೇಷ್ಠತಾ ಪಟ್ಟಿ ಪ್ರಕಟಿಸಿದ ನಂತರ ಕೌನ್ಸಲಿಂಗ್ ಪ್ರಕ್ರಿಯೆ  ಆರಂಭವಾಗಲಿದೆ. ಜನವರಿ 30 ರಂದು ಜಿಲ್ಲಾ ಹಂತದಲ್ಲಿ ಮರು ಹೊಂದಾಣಿಕೆ ಪ್ರಕ್ರಿಯೆ ನಡೆಯಲಿದೆ. ಫೆಬ್ರವರಿ 9 ರಿಂದ ಜಿಲ್ಲಾ ಹಂತದಲ್ಲಿ ವರ್ಗಾವಣೆ ಕೌನ್ಸಲಿಂಗ್ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ

0 Comments: