-->

15 ವರ್ಷದ ಬಾಲಕನೊಂದಿಗೆ ಮದುವೆಯಾದ 22 ವರ್ಷದ ಯುವತಿ



ಕೋಲ್ಕತ್ತಾ: 22 ವರ್ಷ ವಯಸ್ಸಿನ ಯುವತಿಯೊಬ್ಬಳು 15 ವರ್ಷದ ಬಾಲಕನೊಂದಿಗೆ ವಿವಾಹವಾಗಿರುವ ಪ್ರಸಂಗ ಪಶ್ಚಿಮ ಬಂಗಾಳದ ಶಾಂತಿಪುರದಲ್ಲಿ ನಡೆದಿದೆ. 15 ವರ್ಷದ ಬಾಲಕ ನಾಡಿಯಾದ ಕೃಷ್ಣನಗರ ಪ್ರದೇಶದವನು. ಯುವತಿ ಜೊತೆ ಫೇಸ್‍ಬುಕ್‍ನಲ್ಲಿ ಪರಿಚ ಯವಾಗಿದ್ದನು ಎಂದು ತಿಳಿದು ಬಂದಿದೆ.

ನಂತರ ಇವರ ಸ್ನೇಹ, ಪ್ರೀತಿಗೆ ತಿರುಗಿ ಇಬ್ಬರು ಮದುವೆಯಾಗಿದ್ದಾರೆ. ಮನೆಯಿಂದ ಓಡಿ ಹೋಗಿರುವ ಈ ಜೋಡಿ ದೇವಸ್ಥಾನದಲ್ಲಿ ಮದುವೆ ಮಾಡಿಕೊಂಡಿದೆ. ತದನಂತರ ಲೋಕಲ್ ರೈಲಿನಲ್ಲಿ ಶಾಂತಿಪುರಕ್ಕೆ ಬರುತ್ತಿದ್ದ ವೇಳೆ ಅವರ ಮಾತು ಕೇಳಿ ಪ್ರಯಾಣಿಕರಿಗೆ ಅನುಮಾನ ಬಂದಿದೆ.

ಹೀಗಾಗಿ, ಚೈಲ್ಡ್‌ಲೈನ್‌ಗೆ ಮಾಹಿತಿ ನೀಡಿದ್ದಾರೆ. ಇದರ ಬೆನ್ನಲ್ಲೇ ರೈಲ್ವೆ ಪೊಲೀಸರು ಇವರನ್ನು ಬಂಧಿಸಿದ್ದಾರೆ. ಇದೀಗ ಇಬ್ಬರನ್ನು ವಶಕ್ಕೆ ಪಡೆದುಕೊಂಡಿರುವ ಶಾಂತಿಪುರ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಬಾಲಕ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಯುವತಿ ಉತ್ತರಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದಾಳೆ ಎನ್ನಲಾಗಿದೆ. ರೈಲಿನಲ್ಲಿ ಪ್ರಯಾಣ ಬೆಳೆಸುತ್ತಿದ್ದ ವೇಳೆ ಇಬ್ಬರೂ ಉತ್ತರಪ್ರದೇಶಕ್ಕೆ ಹೋಗುವುದಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದರು.


ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್



ಬೆಂಗಳೂರು : ಆಸ್ತಿ ಖರೀದಿ, ಮಾರಾಟಗಾರರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿಸುದ್ದಿ ನೀಡಿದ್ದು, ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ ಕಾವೇರಿ 2.0 ತಂತ್ರಾಂಶ ಬಳಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ಆರ್.ಅಶೋಕ್, ಆಸ್ತಿ ಖರೀದಿ, ಮಾರಾಟದ ವೇಳೆ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತ್ವರಿತಗತಿಯಲ್ಲಿ ಸೇವೆ ನೀಡಲು ಕಾವೇರಿ 2.0 ತಂತ್ರಾಂಶ ಅಳವಡಿಸಲು ಕಂದಾಯ ಇಲಾಖೆ ಮುಂದಾಗಿದೆ. ಫೆಬ್ರವರಿ 2 ರಿಂದ ಮೈಸೂರು,ಮಂಗಳೂರು, ಬೆಳಗಾವಿ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಇದನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಹೊಸ ಕಾವೇರಿ 2.0 ತಂತ್ರಾಂಶದಿಂದ ಕಚೇರಿಗಳಿಗೆ ಅಲೆದಾಟ ತಪ್ಪಲಿದೆ. ಸರ್ವರ್ ಸಮಸ್ಯೆಯೂ ಬಗೆಹರಿಯಲಿದೆ.

ನಕಲಿ ದಾಖಲೆ ಸೃಷ್ಟಿಸಿ ಭೂಕಬಳಿಕೆಗೆ ಬ್ರೇಕ್ ಬೀಳಲಿದೆ ಎಂದು ಹೇಳಿದ್ದಾರೆ.



0 Response to 15 ವರ್ಷದ ಬಾಲಕನೊಂದಿಗೆ ಮದುವೆಯಾದ 22 ವರ್ಷದ ಯುವತಿ

Post a Comment