Ads

Thursday 15 February 2024

BIG NEWS: 'ಶಾಲಾ-ಕಾಲೇಜು'ಗಳಲ್ಲಿ 'ಧಾರ್ಮಿಕ ಹಬ್ಬ'ಗಳನ್ನು ಆಚರಿಸುವಂತಿಲ್ಲ - 'ರಾಜ್ಯ ಸರ್ಕಾರ' ಆದೇಶ

Admin       Thursday 15 February 2024


ಶಾಲಾ-ಕಾಲೇಜುಗಳಲ್ಲಿ ನಿಗದಿತ ರಾಷ್ಟ್ರೀಯ ಹಬ್ಬ, ನಾಡಹಬ್ಬವನ್ನು ಮಾತ್ರವೇ ಆಚರಿಸಬೇಕು. ಅದರ ಹೊರತಾಗಿ ಬೇರೆ ಯಾವುದೇ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಖಡಕ್ ಆದೇಶ ಮಾಡಿದೆ.

ಈ ಸಂಬಂಧ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಸುತ್ತೋಲೆ ಹೊರಡಿಸಲಾಗಿದೆ.

ಅದರಲ್ಲಿ ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ. ನಿಗದಿತ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಮಾತ್ರವೇ ಆಚರಿಸುವಂತೆ ತಿಳಿಸಲಾಗಿದೆ.

ಈ ಸುತ್ತೋಲೆಯನ್ನು ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ ಅವರ ಸೂಚನೆಯ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಘ ಹೊರಡಿಸಿದೆ. ಆ ಸುತ್ತೋಲೆಯಲ್ಲಿ 10 ಅನುಮೋದಿತ ರಾಷ್ಟ್ರೀಯ ಹಬ್ಬಗಳನ್ನು ಮಾತ್ರವೇ ಶಾಲೆ, ಕಾಲೇಜುಗಳಲ್ಲಿ ಆಚರಿಸಬೇಕು. ಧಾರ್ಮಿಕ ಹಬ್ಬ ಆಚರಿಸದಂತೆ ಸೂಚಿಸಲಾಗಿದೆ.

ಒಂದು ವೇಳೆ ಈ ಆದೇಶ ಉಲ್ಲಂಘಿಸಿ ಧಾರ್ಮಿಕ ಹಬ್ಬಗಳನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಿದ್ರೇ ಪ್ರಾಂಶುಪಾಲರು, ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.

ಅಂದಹಾಗೇ ಕ್ರಿಸ್ಮಸ್, ಈದ್ ಮಿಲಾದ್, ಸಂಕ್ರಾಂತಿ, ಯುಗಾದಿ, ರಂಜಾನ್ ಸೇರಿದಂತೆ ವಿವಿಧ ಧಾರ್ಮಿಕ ಹಬ್ಬಗಳನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸುವಂತಿಲ್ಲ ಎಂಬುದಾಗಿ ಸುತ್ತೋಲೆಯ ಆದೇಶದಲ್ಲಿ ತಿಳಿಸಲಾಗಿದೆ.

logoblog

Thanks for reading BIG NEWS: 'ಶಾಲಾ-ಕಾಲೇಜು'ಗಳಲ್ಲಿ 'ಧಾರ್ಮಿಕ ಹಬ್ಬ'ಗಳನ್ನು ಆಚರಿಸುವಂತಿಲ್ಲ - 'ರಾಜ್ಯ ಸರ್ಕಾರ' ಆದೇಶ

Previous
« Prev Post

No comments:

Post a Comment