Ads

Tuesday 16 April 2024

ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ನಿಧನ : ಕಂಬನಿ ಮಿಡಿದ ರಾಜಕೀಯ ಗಣ್ಯರು

Admin       Tuesday 16 April 2024


ಹೃದಯಾಘಾತದಿಂದ ಇಂದು ಹಿರಿಯ ನಟ ದ್ವಾರಕೀಶ್ (81) ನಿಧನರಾಗಿದ್ದು, ವಿವಿಧ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.


ಬಿ.ಎಸ್ ಯಡಿಯೂರಪ್ಪ ಸಂತಾಪ. ಕನ್ನಡ ಚಿತ್ರರಂಗ ಕಂಡ ಖ್ಯಾತ ಕಲಾವಿದ, ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಶ್ರೀ ದ್ವಾರಕೀಶ್ ವಿಧಿವಶರಾದ ಸುದ್ದಿ ಅತ್ಯಂತ ಆಘಾತ ಉಂಟುಮಾಡಿದೆ.


ನಾಡಿನ ದಿಗ್ಗಜ ಕಲಾವಿದರೊಂದಿಗೆ ನಟಿಸಿ, ಅವರ ಸಿನಿಮಾಗಳನ್ನು ನಿರ್ಮಿಸಿದ್ದ ದ್ವಾರಕೀಶ್ ಅವರ ನಿಧನದಿಂದ ಚಿತ್ರರಂಗ ಒಬ್ಬ ಸಾಧಕ ಕಲಾವಿದನನ್ನು ಕಳೆದುಕೊಂಡಿದೆ. ಅಗಲಿದ ಆ ಹಿರಿಯ ಕಲಾಚೇತನಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರಿಗೆ, ಆಪ್ತೇಷ್ಟರಿಗೆ, ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ದಯಪಾಲಿಸಲಿ ಎಂದು ಕೋರುತ್ತೇನೆ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.


ಮಾಜಿ ಸಿಎಂ ಬೊಮ್ಮಾಯಿ ಸಂತಾಪ


ಕನ್ನಡ ಚಿತ್ರರಂಗದ ಮೇರು ನಟ, ನಿರ್ದೇಶಕ ಹಾಗೂ ಹಿರಿಯ ನಿರ್ಮಾಪಕರಾದ ಶ್ರೀ ದ್ವಾರಕೀಶ್ ಅವರು ನಿಧನರಾಗಿರುವ ವಿಷಯ ತಿಳಿದು ತುಂಬಾ ದಃಖಿತನಾಗಿದ್ದೇನೆ. ಅವರ ಅಗಲಿಕೆಯಿಂದ ಕನ್ನಡ ಕಲಾಕ್ಷೇತ್ರ ಬಡವಾದಂತಾಗಿದೆ. ದ್ವಾರಕೀಶ್ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತನು ಅವರ ಕುಟುಂಬಕ್ಕೆ ಹಾಗೂ ಅವರ ಅಪಾರ ಅಭಿಮಾನಿ ಬಳಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಟ್ವೀಟ್ ಮಾಡಿದ್ದಾರೆ.


ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ


ಕನ್ನಡದ ಹಿರಿಯ ನಟರಾದ ಶ್ರೀ ದ್ವಾರಕೀಶ್ ಅವರ ಅಗಲಿಕೆ ನನಗೆ ಬಹಳ ನೋವುಂಟು ಮಾಡಿದೆ. ಕಲಾವಿದರಾಗಿ ಅಷ್ಟೇ ಅಲ್ಲದೆ; ನಿರ್ಮಾಪಕರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಅವರು ಸಲ್ಲಿಸಿರುವ ಅನುಪಮ ಸೇವೆ ಆವಿಸ್ಮರಣೀಯ. ವರನಟ ಡಾ||ರಾಜ್ಕುಮಾರ್, ಡಾ||ವಿಷ್ಣುವರ್ಧನ್, ಶ್ರೀ ಅಂಬರೀಶ್ರಂಥ ದಿಗ್ಗಜರ ಜತೆ ನಟಿಸಿದ್ದ ಅವರು, ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಿನಿಮಾ ಆಸ್ತಿಯಾಗಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.


ಡಿಸಿಎಂ ಡಿಕೆಶಿ ಟ್ವೀಟ್

ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾದ ಶ್ರೀ ದ್ವಾರಕೀಶ್ ಅವರು ನಿಧನರಾದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು. 1964ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅವರು, ಹಾಸ್ಯ ಕಲಾವಿದ, ನಾಯಕ ಹಾಗೂ ಪೋಷಕ ನಟನಾಗಿ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಕನ್ನಡ ಚಿತ್ರರರಂಗಕ್ಕೆ ಅಮೂಲ್ಯ ಕೊಡುಗೆ ನೀಡಿದ ದ್ವಾರಕೀಶ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಭಗವಂತನು ಅವರ ಕುಟುಂಬಕ್ಕೆ ಅಗಲಿಕೆಯ ನೋವು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

logoblog

Thanks for reading ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ನಿಧನ : ಕಂಬನಿ ಮಿಡಿದ ರಾಜಕೀಯ ಗಣ್ಯರು

Previous
« Prev Post

No comments:

Post a Comment