Ads

Saturday 6 April 2024

ಹಳೆಯ ಪಿಂಚನೆ ಯೋಜನೆಗೆ ಸರ್ಕಾರಿ ನೌಕರರು ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ನಮೂನೆ ಇಲ್ಲಿದೆ

Admin       Saturday 6 April 2024



ಕಾಂಗ್ರೆಸ್ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಪುನಃ ಜಾರಿಗೆ ತರುತ್ತಿದೆ. ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..? ಅರ್ಜಿ ನಮೂನೆ ಹೇಗಿದೆ ಎಂಬುದನ್ನು ಇಲ್ಲಿ ನೋಡೋಣ.

ದಿನಾಂಕ 01-04-2006 ಅಧಿಸೂಚನೆಗಳ ನೇಮಕಾತಿ ಹೊಂದಿ ಮೂಲಕ ಆಯ್ಕೆ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಅದಕ್ಕೆ ಕೆಲವು ಷರತ್ತುಗಳನ್ನು ಸರ್ಕಾರದ ಆದೇಶದಲ್ಲಿ ನೀಡಲಾಗಿದೆ.

  1. ದಿನಾಂಕ 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಇಚ್ಛಿಸಿದಲ್ಲಿ ತಮ್ಮ ಅಭಿಮತವನ್ನು ನಿಗದಿತ ನಮೂನೆಯಲ್ಲಿ ದಿನಾಂಕ 30.06.2024ರೊಳಗೆ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು. ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ.
  2. ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ.
  3. ಆಯ್ಕೆಯನ್ನು ಚಲಾಯಿಸಲು ಅರ್ಹ ಸರ್ಕಾರಿ ನೌಕರರು ನಿಗದಿತ ದಿನಾಂಕದೊಳಗೆ ತಮ್ಮ ಆಯ್ಕೆಯನ್ನು ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರೆಯುತ್ತಾರೆ.
  4. ದಿನಾಂಕ 01.04.2006ರ ಪೂರ್ವದಲ್ಲಿನ ರಾಜ್ಯ ಸಿವಿಲ್ ಸೇವೆಯಲ್ಲಿನ ಖಾಲಿ ಹುದ್ದೆಗಳಿಗೆ ಹೊರಡಿಸಲಾದ ನೇಮಕಾತಿ ಅಧಿಸೂಚನೆ ಅನ್ವಯ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು ತದನಂತರ ಸಮುಚಿತ ಮಾರ್ಗದಲ್ಲಿ ಅರ್ಜಿಯನ್ನು ಸಲ್ಲಿಸಿ ಸರ್ಕಾರದ ಅನ್ಯ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ ಹೊಂದಿದ ಅರ್ಹ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆ ಸೌಲಭ್ಯ ಪಡೆದುಕೊಳ್ಳಲು ಇಚ್ಚಿಸಿದಲ್ಲಿ ಮನವಿಯನ್ನು ಹಿಂದಿನ ನೇಮಕಾತಿ ಪ್ರಾಧಿಕಾರಕ್ಕೆ ದಿನಾಂಕ 30.06.2024ರೊಳಗಾಗಿ ಸಲ್ಲಿಸತಕ್ಕದ್ದು.

ನೇಮಕಾತಿ ಪ್ರಾಧಿಕಾರವು ಅಂತಹ ಸರ್ಕಾರಿ ನೌಕರನು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಿ ಅನ್ಯ ಇಲಾಖೆಗೆ ಆಯ್ಕೆಯಾದ ಹುದ್ದೆಗೆ ವರದಿಮಾಡಿಕೊಳ್ಳುವ ಸಲುವಾಗಿ ಬಿಡುಗಡೆ ಹೊಂದಿರುವುದನ್ನು ಹಾಗೂ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆ ಅರ್ಹತೆ ಹೊಂದಿರುವುದನ್ನು ಖಚಿತಪಡಿಸಿಕೊಂಡು ಮುಂದಿನ ಕ್ರಮವಹಿಸತಕ್ಕದ್ದು ಎಂದು ತಿಳಿಸಲಾಗಿದೆ. ಆದ್ದರಿಂದ ಇಚ್ಛೆಯುಳ್ಳ ಎಲ್ಲಾ ಅರ್ಹ ನೌಕರರು ಅಂತಿಮ ದಿನಾಂಕದವರೆಗೂ ಕಾಯದೆ ಸೂಕ್ತ ದಾಖಲಾತಿಗಳೊಂದಿಗೆ ತಮ್ಮ ಪ್ರಸ್ತಾವನೆಯನ್ನು ಸಲ್ಲಿಸಬೇಖು ಎಂದು ಸೂಚಿಸಿದೆ.

"ರವರಿಗೆ,

(ಅಧಿಕಾರಿ/ನೌಕರರ ಸಂಬಂಧಪಟ್ಟ ನೇಮಕಾತಿ ಪ್ರಾಧಿಕಾರ) ಇಲಾಖೆ,

ಮಾನ್ಯರೇ,

ವಿಷಯ: ದಿನಾಂಕ 01.04.2006 ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು.

------------ ಇಲಾಖೆಯಲ್ಲಿ -------- ಆಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ/ಶ್ರೀಮತಿ --------- ಆದ ನಾನು ------------ ಪ್ರಪ್ರಥಮವಾಗಿ ---------- ಇಲಾಖೆಯಲ್ಲಿ --------- ಹುದ್ದೆಗೆ ದಿನಾಂಕ -------- ರಂದು ಸರ್ಕಾರಿ ಸೇವೆಯಲ್ಲಿ ವರದಿ ಮಾಡಿಕೊಂಡಿರುತ್ತೇನೆ. ಈ ಹುದ್ದೆಗೆ ನೇಮಕಾತಿ ಅಧಿಸೂಚನೆಯ ಪ್ರಕಟಣೆಯನ್ನು ದಿನಾಂಕ --------- ಹೊರಡಿಸಲಾಗಿರುತ್ತದೆ. ನಾನು ಉಲ್ಲೇಖಿತ ಆದೇಶದನ್ವಯ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಲು ಅರ್ಹವಿರುವುದರಿಂದ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನಗೊಳಪಡಿಸಲು ನನ್ನ ಅಭಿಮತವನ್ನು ಈ ಮೂಲಕ ತಿಳಿಸುತ್ತಾ, ಈ ಕೆಳಕಂಡ ಮಾಹಿತಿ / ದಾಖಲೆಗಳನ್ನು ಇದರೊಂದಿಗೆ ಸಲ್ಲಿಸುತ್ತಿದ್ದೇನೆ.

  1. ಹುದ್ದೆಗಳ ಭರ್ತಿಗಾಗಿ ಪ್ರಕಟಿಸಲಾದ ನೇಮಕಾತಿ ಅಧಿಸೂಚನೆ ದಿನಾಂಕ: ರ ಪ್ರತಿಯನ್ನು ಲಗತ್ತಿಸಿದೆ.
  2. ಸಂಬಂಧಪಟ್ಟ ಆಯ್ಕೆ ಪಟ್ಟಿ ದಿನಾಂಕ: ರ ಪ್ರತಿಯನ್ನು ಲಗತ್ತಿಸಿದೆ.
  3. ನೇಮಕಾತಿ ಆದೇಶ ದಿನಾಂಕ: ರ ಪ್ರತಿಯನ್ನು ಲಗತ್ತಿಸಿದೆ.
  4. ನೇಮಕಾತಿಯ ನಂತರ ಇಲಾಖೆ ಬದಲಾವಣೆಯಾಗಿದೆಯೇ? ವಿವರಗಳನ್ನು ನೀಡುವುದು
  5. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕಛೇರಿ/ಇಲಾಖೆಯ ವಿಳಾಸ:
  6. ಕೆಜಿಐಡಿ ಸಂಖ್ಯೆ:
  7. NPS ಪ್ರಾನ್ ಸಂಖ್ಯೆ:
  8. ಪ್ರಸ್ತುತ ವೇತನ ಚೀಟಿ:

ದಿನಾಂಕ:

(ಸಹಿ ಮತ್ತು ಹೆಸರು)

logoblog

Thanks for reading ಹಳೆಯ ಪಿಂಚನೆ ಯೋಜನೆಗೆ ಸರ್ಕಾರಿ ನೌಕರರು ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ನಮೂನೆ ಇಲ್ಲಿದೆ

Previous
« Prev Post

No comments:

Post a Comment