Ads

Wednesday 17 April 2024

ಲೋಕಸಭಾ ಚುನಾವಣೆ: ಕರ್ನಾಟಕದ ನೌಕರರಿಗೆ ವೇತನ ಸಹಿತ ಸಾವ್ರರ್ತಿಕ ರಜೆ ಘೋಷಣೆ!

Admin       Wednesday 17 April 2024



ಕನ್ನಡ ನ್ಯೂಸ್-24

ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ 2024ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26, 2024ರ ಶುಕ್ರವಾರದಂದು ಹಾಗೂ ಎರಡನೇ ಹಂತದಲ್ಲಿ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಹಾಗೂ ಶೋರಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಮೇ 07, 2024ರ ಮಂಗಳವಾರ ನಡೆಸಲಾಗುತ್ತಿದ್ದು, ಮತದಾನ ನಡೆಯುವ ದಿನದಂದು ವೇತನ ಸಹಿತ ಸಾವ್ರರ್ತಿಕ ರಜೆ ಘೋಷಿಸಲಾಗಿದೆ.


ಲೋಕಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪ್ರಜಾಪ್ರತಿನಿಧಿ ಕಾಯ್ದೆ 1951 ಹಾಗೂ ಓegoಣiಚಿbಟe Iಟಿsಣಡಿumeಟಿಣ ಂಛಿಣ 1881 ರ ಪ್ರಕಾರ ವೇತನ ಸಹಿತ ರಜೆ ನೀಡಲು ಆದೇಶಿಸಿದೆ.


ಮೊದಲ ಹಂತದಲ್ಲಿ ಲೋಕಸಭಾ ಚುನಾವಣಾ ಕ್ಷೇತ್ರಗಳಾದ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಎರಡನೇ ಹಂತದಲ್ಲಿ ಲೋಕಸಭಾ ಕ್ಷೇತ್ರಗಳಾದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರುಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಹಾಗೂ ವಿಧಾನಸಭಾ ಉಪಚುನಾವಣೆಯು ಯಾದಗಿರಿ ಜಿಲ್ಲೆಯ ಶೋರಾಪುರ ಕ್ಷೇತ್ರಗಳಿಗೆ ನಡೆಯಲಿದೆ.


ಸದರಿ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ಏಪ್ರಿಲ್ 26 ಮತ್ತು ಮೇ 07, 2024 ರಂದು ನಡೆಯುವ ಚುನಾವಣೆಗೆ ಆಯಾ ಚುನಾವಣಾ ಕ್ಷೇತ್ರಗಳಿಗೆ ಸೀಮಿತಗೊಳಿಸಿ ಸಾರ್ವತ್ರಿಕ ರಜೆಯನ್ನು ಘೋಷಿಸಿದೆ.

ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ, ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡತಕ್ಕದ್ದು ಎಂದು ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ರಾಜ್ಯ ಶಿಷ್ಠಾಚಾರ) ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.


 🙏ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ🙏

logoblog

Thanks for reading ಲೋಕಸಭಾ ಚುನಾವಣೆ: ಕರ್ನಾಟಕದ ನೌಕರರಿಗೆ ವೇತನ ಸಹಿತ ಸಾವ್ರರ್ತಿಕ ರಜೆ ಘೋಷಣೆ!

Previous
« Prev Post

No comments:

Post a Comment