Ads

Thursday 27 June 2024

ರಾಜ್ಯದ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ : ʻOPSʼ ,7 ನೇ ವೇತನ ಆಯೋಗ ಜಾರಿಗೆ CM ಗ್ರೀನ್‌ ಸಿಗ್ನಲ್...!

Admin       Thursday 27 June 2024


ಹಳೆಯ ಪಿಂಚಣಿಯ ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ರಾಜ್ಯದ ಸರ್ಕಾರಿ ನೌಕರರಿಗೆ ರಾಜ್ಯದ ಮುಖ್ಯಮಂತ್ರಿ CM ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಏಳನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸುವ ಕುರಿತಂತೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.


ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ C.S.‌ ಷಡಕ್ಷರಿ ನೇತೃತ್ವದ ನಿಯೋಗವು ಮಂಗಳವಾರ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಆಯೋಗದ ವರದಿ ಸಲ್ಲಿಕೆಯಾಗಿ ಎರಡು ತಿಂಗಳಾದರೂ ಈವರೆಗೆ ಶಿಫಾರಸುಗಳು ಜಾರಿಯಾಗಿಲ್ಲ.


ಇದರಿಂದ ಸರ್ಕಾರಿ ನೌಕರರ ಜೀವನ ಕಷ್ಟಕರವಾಗಿರುವುದರಿಂದ ವರದಿಯನ್ನು ಆದಷ್ಟು ಬೇಗ ಜಾರಿ ಮಾಡಬೇಕು ಮತ್ತು ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಮರು ಸ್ಥಾಪಿಸಬೇಕು ಎಂದು ಮನವಿ ಮಾಡಲಾಗಿದೆ.


ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿರುವ CM ಸಿದ್ದರಾಮಯ್ಯ ಸರ್ಕಾರಿ  ನೌಕರರ ಬೇಡಿಕೆಗಳಿಗೆ ಸಕರಾತ್ಮಕವಾಗಿ ಸ್ಪಂಧಿಸಿ, ನಮ್ಮ ಸರ್ಕಾರ ಸರ್ಕಾರಿ ನೌಕರರ ಪರವಾಗಿದೆ ಎಂದು ತಿಳಿಸಿ, ಈಗಾಗಲೇ ಸಚಿವ ಸಂಪುಟದಲ್ಲಿ 7 ನೇ ವೇತನ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವ ವಿಷಯವನ್ನು ಪ್ರಸ್ತಾಪಿಸಲಾಗಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ವೇತನ ಭತ್ಯೆಗಳನ್ನು ಪರಿಷ್ಕರಿಸುವ ಸ್ಪಷ್ಟ ಭರವಸೆಯನ್ನು ನಿಯೋಗಕ್ಕೆ ನೀಡಿದ್ದಾರೆ.


ಸಿಎಂ ಸಿದ್ದರಾಮಯ್ಯರೊಂದಿಗೆ ಚರ್ಚಿಸಲಾದ ಪ್ರಮುಖ ಅಂಶಗಳು

  • ದಿನಾಂಕ: 25-02-2024 ರಂದು ರಾಜ್ಯ ಮಟ್ಟದ ಸಮ್ಮೇಳನದ ಸಂದರ್ಭದಲ್ಲಿ 7ನೇ ವೇತನ ಆಯೋಗವು ವರದಿ ನೀಡಿದ ತಕ್ಷಣ ಅನುಷ್ಠಾನಗೊಳಿಸುವ ಭರವಸೆ ನೀಡಿದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು.
  • ದಿನಾಂಕ: 19-11-2022ರಂದು ರಾಜ್ಯ 7ನೇ ವೇತನ ಆಯೋಗವನ್ನು ರಚನೆಯಾಗಿ, ದಿನಾಂಕ: 16-03-2024 ರಂದು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಸುಮಾರು 3 ತಿಂಗಳಾದರೂ ವರದಿಯ ಯಾವುದೇ ಶಿಫಾರಸ್ಸುಗಳನ್ನು ಇದುವರೆವಿಗೂ ಜಾರಿಗೊಳಿಸಿರುವುದಿಲ್ಲ.
  • ನಮ್ಮ ಸರ್ಕಾರಿ ನೌಕರರಿಗೆ ದಿನಾಂಕ:01-07-2022ರಿಂದ 7ನೇ ವೇತನ ಆಯೋಗ ಜಾರಿಯಾಗಬೇಕಾಗಿದ್ದು, ಈಗಾಗಲೇ 2 ವರ್ಷ ವಿಳಂಬವಾಗಿದೆ.
  • ರಾಜ್ಯ ಸರ್ಕಾರಿ ನೌಕರರ ಜೀವನ ನಿರ್ವಹಣೆ ಕಷ್ಟವಾಗಿರುವುದರಿಂದ ಅದಷ್ಟು ಬೇಗನೆ ರಾಜ್ಯ 7 ನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ಒತ್ತಾಯಿಸಲಾಯಿತು.
  • ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲು ರಚಿಸಿರುವ ಸಮಿತಿಯ ವರದಿಯನ್ನು ಪಡೆದು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು.
  • ರಾಜ್ಯ ಸರ್ಕಾರಿ ನೌಕರರು ಹಾಗೂ ಅವಲಂಬಿತರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನದ ಬಗ್ಗೆಯು ಸಹ ಮಾನ್ಯ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಲಾಯಿತು.

logoblog

Thanks for reading ರಾಜ್ಯದ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ : ʻOPSʼ ,7 ನೇ ವೇತನ ಆಯೋಗ ಜಾರಿಗೆ CM ಗ್ರೀನ್‌ ಸಿಗ್ನಲ್...!

Newest
You are reading the newest post

No comments:

Post a Comment