ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಪಿಯು ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗಳಿಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ರಾಜ್ಯದ ಶಿಕ್ಷಣ ಇಲಾಖೆ ಅಧಿಕೃತವಾಗಿ ಪ್ರಾರಂಭಿಸಿದೆ. ಸ್ನಾತಕೋತ್ತರ ಪದವಿ (Post Graduate) ಹೊಂದಿರುವ ಪ್ರೌಢಶಾಲಾ ಶಿಕ್ಷಕರಿಗೆ ಈ ಅವಕಾಶವನ್ನು ನೀಡಲಾಗುತ್ತಿದ್ದು, ರಾಜ್ಯದ ಎಲ್ಲಾ ಶಾಲಾ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಒಂದೇ ವ್ಯವಸ್ಥೆಯಲ್ಲಿ ತಯಾರಿಸಲಾಗುತ್ತಿದೆ.
ಜೇಷ್ಠತಾ ಪಟ್ಟಿ ಪ್ರಕಟಣೆ ಮತ್ತು ತಿದ್ದುಪಡಿ ಪ್ರಕ್ರಿಯೆ
ರಾಜ್ಯದ ಶಿಕ್ಷಣ ಇಲಾಖೆಯು ಸ್ನಾತಕೋತ್ತರ ಪದವಿ (Post Graduate) ಪದವಿ ಹೊಂದಿರುವ ಪ್ರೌಢಶಾಲಾ ಸಹ ಶಿಕ್ಷಕರಿಗಾಗಿ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು 25/04/2025 ರಂದು ಅದರ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಈ ಪಟ್ಟಿಯನ್ನು online module ಮೂಲಕ ಸಿದ್ಧಪಡಿಸಲಾಗಿದ್ದು, ಶಾಲಾ ಶಿಕ್ಷಕರು ತಮ್ಮ ವಿವರಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಕೋರಬಹುದು.
ಈ ಮಾಹಿತಿ ನಿಮಗೆ ಉಪಯುಕ್ತವಾಗಿದ್ದರೆ ನಿಮ್ಮ ಸ್ನೇಹಿತ ಬಂಧುಗಳಿಗೆ ಶೇರ್ ಮಾಡಿ ಮತ್ತು ಅಗತ್ಯ ಮಾಹಿತಿಗಳು ಬೇಕಾದಲ್ಲಿ www.kannadanews24.com ವೆಬ್ ಸೈಟ್ ಗೆ ಭೇಟಿ ನೀಡಿ ಧನ್ಯವಾದಗಳು....